,

ಬಳ್ಳಾರಿ ಜಿಲ್ಲೆಯಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ: ಪಾಲಿಕೆ ಆಯುಕ್ತ

ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ…

ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿದ್ದು, ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.
ಸಾರ್ವಜನಿಕರಲ್ಲಿ ಮನವಿ ಮತ್ತು ಸಹಾಯವಾಣಿ:
ಜಿಲ್ಲೆಯಲ್ಲಿ ಎಲ್ಲಿಯಾದರೂ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದು ಕಂಡುಬಂದಲ್ಲಿ, ಸಾರ್ವಜನಿಕರು ತಕ್ಷಣವೇ ಪಶುಸಂಗೋಪನಾ ಇಲಾಖೆ- 08392-275146, ಪೊಲೀಸ್ ಇಲಾಖೆ (ತುರ್ತು ಸಂಖ್ಯೆ) 112 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಿಯಮಗಳ ಪಾಲನೆಗಾಗಿ ಎಲ್ಲಾ ಸಮುದಾಯದ ಧಾರ್ಮಿಕ ಮುಖಂಡರು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
*****

Leave a Reply

Your email address will not be published. Required fields are marked *

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ   ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ ಗೌರವ   ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ   ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು   ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ