ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿದ್ದು, ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.
ಸಾರ್ವಜನಿಕರಲ್ಲಿ ಮನವಿ ಮತ್ತು ಸಹಾಯವಾಣಿ:
ಜಿಲ್ಲೆಯಲ್ಲಿ ಎಲ್ಲಿಯಾದರೂ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದು ಕಂಡುಬಂದಲ್ಲಿ, ಸಾರ್ವಜನಿಕರು ತಕ್ಷಣವೇ ಪಶುಸಂಗೋಪನಾ ಇಲಾಖೆ- 08392-275146, ಪೊಲೀಸ್ ಇಲಾಖೆ (ತುರ್ತು ಸಂಖ್ಯೆ) 112 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಿಯಮಗಳ ಪಾಲನೆಗಾಗಿ ಎಲ್ಲಾ ಸಮುದಾಯದ ಧಾರ್ಮಿಕ ಮುಖಂಡರು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
*****
ಬಳ್ಳಾರಿ ಜಿಲ್ಲೆಯಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ: ಪಾಲಿಕೆ ಆಯುಕ್ತ
ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ…
Previous Post
Next Post
Leave a Reply
Latest News

Stay Connected
Tags
About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed









