,

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.
ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.

ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ.
ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ   ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು   ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ   ಬಳ್ಳಾರಿಯಲ್ಲಿ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟನೆ: ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತ -ಎಡಿಸಿ ಮಹಮ್ಮದ್ ಝುಬೇರ್.ಎನ್   ಬಳ್ಳಾರಿ ಜಿಲ್ಲೆಯಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ: ಪಾಲಿಕೆ ಆಯುಕ್ತ