ಬೆಂಗಳೂರು, ಜೂ. 6: ನಾಡಿನ ಬಡಜನರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿದ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಮತ್ತು ಭಾವ ಚಿತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಪುಷ್ಪನಮನ ಮೂಲಕ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಯು.ಟಿ.ಖಾದರ್, ಕೆ.ಹೆಚ್.ಮುನಿಯಪ್ಪ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಪ್ರಸಾದ್ ಅಬ್ಬಯ್ಯ, ಎನ್.ಎ.ಹ್ಯಾರೀಸ್, ರಿಜ್ವಾನ್ ಅರ್ಷದ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಹೆಚ್.ಆಂಜನೇಯ ಮತ್ತಿತರರು ಇದ್ದರು.















