April 28, 2025

ಮಾತೃಭಾಷೆಕನ್ನಡವನ್ನು ಉಳಿಸಿ-ಬೆಳೆಸುವ ಜವಾಬ್ದಾರಿಎಲ್ಲರ ಮೇಲಿದೆ : ಶಾಸಕ ತಮ್ಮಯ್ಯ

ಚಿಕ್ಕಮಗಳೂರು: ಭಾರತದೇಶದಲ್ಲಿ ಕೆಲವು ಭಾಷೆಗಳು ಕಾರಣಾಂತರಗಳಿAದ ನಶಿಸುತ್ತಿರುವ ಈ ಸಂದರ್ಭದಲ್ಲಿ ಮಾತೃಭಾಷೆಕನ್ನಡವನ್ನು ನಶಿಸದಂತೆ ಉಳಿಸಿ ಬೆಳೆಸುವ ಜವಾಬ್ದಾರಿಉಪನ್ಯಾಸಕರು ಮತ್ತುಎಲ್ಲರ ಮೇಲಿದೆಎಂದು ಶಾಸಕ ಹಾಗೂ ಕಾಲೇಜುಅಭಿವೃದ್ಧಿ ಸಮಿತಿಅಧ್ಯಕ್ಷ ಹೆಚ್.ಡಿ. ತಮ್ಮಯ್ಯಕರೆನೀಡಿದರು.

ಅವರುಇಂದುಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಕನ್ನಡ ವಿಭಾಗ ಏರ್ಪಡಿಸಿದ್ದ ‘ಓ ನನ್ನಚೇತನ’ ಕನ್ನಡ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ದೇಶ ಸುತ್ತು ಕೋಶ ಓದು ಎಂಬ ಗಾದೆಯಕುರಿತು ವಿಶ್ಲೇಷಿಸಿದ ಶಾಸಕರು, ಮಾನವನಜೀವನದಲ್ಲಿ ಭಾಷೆ ಬಹಳ ಪ್ರಮುಖ ಸ್ಥಾನ ವಹಿಸುತ್ತದೆ.ಭಾರತದಲ್ಲಿಇರುವ ೩೦ ರಾಜ್ಯಗಳಲ್ಲಿ ಅವರದೇಆದ ಪ್ರಾದೇಶಿಕ ಭಾಷೆಗಳಿವೆ. ಈ ಎಲ್ಲಾ ಭಾಷೆಗಳಲ್ಲಿ ಶ್ರೇಷ್ಠವಾದದ್ದುಕನ್ನಡ ಭಾಷೆಎಂದು ಶ್ಲಾಘಿಸಿದರು.

ವಿದೇಶ ಪ್ರವಾಸಕೈಗೊಂಡ ಸಂದರ್ಭದಲ್ಲಿಕರ್ನಾಟಕರಾಜ್ಯದ ಸಂಸ್ಕೃತಿ, ಕಲೆ, ಸಾಹಿತ್ಯ, ಭಾಷೆ, ಸುಭಿಕ್ಷ ಮತ್ತುಕ್ಷೇಮವಾಗಿ ಸಂಪದ್ಭರಿತ ದೇವಾಲಯಗಳು ಇದ್ದು, ಕನ್ನಡ ನಾಡನ್ನು ಹೊರತುಪಡಿಸಿ ಬೇರೆಲ್ಲೂ ಈ ರೀತಿಕಾಣಲು ಸಾಧ್ಯವಿಲ್ಲ ಎಂದು ಹೇಳಿದರು.

ನಾವೆಲ್ಲಾಕನ್ನಡ ನಾಡಿನಲ್ಲಿ ಹುಟ್ಟಿ ಮಾತೃಭಾಷೆಕನ್ನಡವನ್ನುಕಲಿತು, ಕನ್ನಡ ಸಂಘಗಳ ಸ್ಥಾಪನೆ ಜೊತೆಗೆಕನ್ನಡ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ತಾಯಿ ಭುವನೇಶ್ವರಿಗೆ ವಂದಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದರೆ ಮುಂದೆಕನ್ನಡಐಚ್ಚಿಕ ವಿಷಯದಲ್ಲಿ ಎಂ.ಎ ಪದವಿ ಪಡೆಯಲು ಅನುಕೂಲವಾಗಲಿದೆಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಓರ್ವ ಮಹಿಳೆ ಮಧ್ಯರಾತ್ರಿಯಲ್ಲಿ ನಿರ್ಭೀತಿಯಿಂದಓಡಾಡುವAತಾದಾಗ ಸ್ವಾತಂತ್ರö್ಯಕ್ಕೆ ನಿಜ ಅರ್ಥ ಬರುತ್ತದೆ.ಈ ಕಾಲೇಜಿಗೆ ನೂತನ ಸುಸಜ್ಜಿತಕಟ್ಟಡ ನಿರ್ಮಾಣ ಮಾಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯಕಲ್ಪಿಸುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಸಬಲೀಕರಣಕ್ಕೆಉತ್ತೇಜನ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದಿಂದಅನುದಾನತAದುಕಾಲೇಜುಅಭಿವೃದ್ಧಿಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಕಾಲೇಜಿನಕನ್ನಡ ವಿಭಾಗದ ಮುಖ್ಯಸ್ಥಡಾ.ಮೂಡಲಗಿರಿಯಪ್ಪ ಮಾತನಾಡಿ, ಕಾಲೇಜಿನ ಹೆಚ್ಚು ಕೊಠಡಿಗಳನ್ನು ನಿರ್ಮಾಣ ಮಾಡಲು ೫ ಕೋಟಿರೂಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಅಧ್ಯಕ್ಷತೆಯನ್ನು ಪ್ರಾಂಶುಪಾಲ ದಾಮೋದರಗೌಡ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಐಡಿಎಸ್‌ಜಿಕಾಲೇಜಿನಕನ್ನಡ ಸಹ ಪ್ರಾಧ್ಯಾಪಕರಾದ ಸುಧ ಭಾಗವಹಿಸಿ ಅಕ್ಕನ ವಚನಗಳ ಸ್ತಿçÃವಾದಿ ನೆಲೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಪ್ರಾಧ್ಯಾಪಕರುಗಳಾದ ಶ್ರೀನಿವಾಸ್, ದೀಕ್ಷಿತ್, ಗ್ರಂಥಪಾಲಕದೇವರಾಜ್,  ನಗರಸಭೆ ಸದಸ್ಯ ಶಾದಬ್‌ಆಲಂಖಾನ್, ಧ್ರುವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಮಾಲ ಸ್ವಾಗತಿಸಿದರು.

error: Content is protected !!