Category: ಕರ್ನಾಟಕ
-

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…
-

ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
ಬಳ್ಳಾರಿ,ಮೇ 28: ತಾಲ್ಲೂಕಿನ ಯರಗುಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಣಕಲ್ಲು ಗ್ರಾಮದಲ್ಲಿ ಜೂ. 4 ಮತ್ತು 5 ರಂದು ಆಯೋಜಿಸಲಾಗಿದ್ದ ಶ್ರೀ ದುರುಗಮ್ಮ ಮತ್ತು ಮರಿಗಮ್ಮ ದೇವಿಯ ದೇವರ ಜಾತ್ರೆ ಹಾಗೂ ಕುಂಭೋತ್ಸವ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಬೆಣಕಲ್ಲು ಗ್ರಾಮದಲ್ಲಿ ಸುಮಾರು 18 ವರ್ಷಗಳ ಹಿಂದೆ (2009ರಲ್ಲಿ) ಸಾಂಪ್ರದಾಯಿಕ ಕುಂಭೋತ್ಸವ ನಡೆದಿತ್ತು. ಆ ಬಳಿಕ ವಿವಿಧ ಕಾರಣಗಳಿಂದಾಗಿ ಕಳೆದ 18 ವರ್ಷಗಳಿಂದ ಈ ಕಾರ್ಯಕ್ರಮ…
-

ಬಳ್ಳಾರಿಯಲ್ಲಿ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟನೆ: ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತ -ಎಡಿಸಿ ಮಹಮ್ಮದ್ ಝುಬೇರ್.ಎನ್
ಬಳ್ಳಾರಿ,ಮೇ 27: ನಗರದಲ್ಲಿ ನಿವಾಸಿ ಕೇಂದ್ರಿತ ಆಧಾರ್ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆ ಒದಗಿಸಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ ನೂತನ ಆಧಾರ್ ಕೇಂದ್ರ ಆರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು. ಬೆಂಗಳೂರಿನ ಯುಐಡಿಎಐ ಪ್ರಾದೇಶಿಕ ಕಚೇರಿ ವತಿಯಿಂದ ಸ್ಥಳೀಯ ನೇತಾಜಿ ನಗರದಲ್ಲಿ ಬುಧವಾರ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಳಾರಿಯ ಈ ನೂತನ ಕೇಂದ್ರವು ಆಧುನಿಕ ಸೌಕರ್ಯಗಳನ್ನು…
-
ಬಳ್ಳಾರಿ ಜಿಲ್ಲೆಯಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ: ಪಾಲಿಕೆ ಆಯುಕ್ತ
ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ…
-

ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಮೇ: 27: ಹೊಸದಾಗಿ ಸಚಿವ ಸಂಪುಟ ಪುನರ್ರಚನೆಯಾದರೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಎಂ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ ಶಾಸಕಾಂಗ ಪಕ್ಷದ ಸಭೆಯ ಬಗ್ಗೆಯೂ ಕರೆ ಬಂದಿಲ್ಲ, ಆದರೆ ಸಿಎಂ ಬದಲಾವಣೆಗೆ…
-

ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ಇಂಟೆಲ್ ಹಬ್, 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ
ಬೆಂಗಳೂರು: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ. ಕಾವೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯು ಪರವಾಗಿ ಅದರ ಸಿಓಓ ಮತ್ತು ವಿಶೇಷ ಯೋಜನೆಯ ನಿರ್ದೇಶಕ ಸುದೀಪ್ ದಳವಿ…
-

ಜೆಸ್ಕಾಂ ಜಾಗೃತಿ ಸಿಪಿಸಿ ವೀರೇಶ್ ಗೆ ಉತ್ತಮ ಸೇವಾ ಪ್ರಮಾಣ ಪತ್ರ ಪ್ರಶಸ್ತಿ ಪ್ರದಾನ
ಬಳ್ಳಾರಿ, ಮೇ 26: ನಗರದ ಜೆಸ್ಕಾಂ ಜಾಗೃತಿದಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಪಿಸಿ (ಪೊಲೀಸ್ ಕಾನ್ ಸ್ಟೇಬಲ್) ವೀರೇಶ್ ಅವರಿಗೆ ಉತ್ತಮ ಸೇವಾ ಪ್ರಮಾಣ ಪತ್ರ ಪ್ರಶಸ್ತಿ ದೊರೆತಿದೆ. ಉತ್ತಮ ನ್ಯಾಯಾಲಯ ಕರ್ತವ್ಯ ನಿರ್ವಹಣೆ ಹಾಗೂ ಅತೀ ಹೆಚ್ಚು ಕೇಸು ರಿಕವರಿ ಮಾಡಿರುವ ಗಮನಾರ್ಹ ಸೇವೆಗಾಗಿ ಕಲಬುರಗಿಯ ಜೇಸ್ಕಾಂ ಜಾಗೃತಿದಳದ ಪೊಲೀಸ್ ಅಧಿಕ್ಷಕರು ಉತ್ತಮ ಸೇವಾ ಪ್ರಮಾಣ ಪತ್ರ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಲಬುರಗಿ ಜೆಸ್ಕಾಂ ಜಾಗೃತಿ ದಳದ ಪ್ರಭಾರಿ ಎಸ್.ಪಿ ಸುಜಿತ್ ಅವರು ಉಪಸ್ಥಿತರಿದ್ದರು.
-

ಚಾಮರಾಜನಗರದಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ದತ್ತಿನಿಧಿಗೆ 1.10ಲಕ್ಷ ನೀಡಿದ ಶಾಸಕ ಕೃಷ್ಣಮೂರ್ತಿ:ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು: ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದಿಸಿದೆ. ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು, ಸಂಘವು ಸ್ಥಾಪಿಸಿರುವ ಬಿ.ರಾಚಯ್ಯ ಹೆಸರಿನ ದತ್ತಿ ಪ್ರಶಸ್ತಿಗೆ ಒಂದು ಲಕ್ಷ ಹತ್ತು ಸಾವಿರ ರೂ (1,10,000) ಚೆಕ್ ನೀಡಿದ್ದಾರೆ. ಸಂಘದಲ್ಲಿ ಬಿ.ರಾಚಯ್ಯ ಹೆಸರಿನಲ್ಲಿ ದತ್ತಿ ನಿಧಿ…
-

ಕಲೆಗಳ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಿದಾಗ ಮಾತ್ರ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯ -ಡಾ. ರಾಜು ಜಡಾರ್
ಬಳ್ಳಾರಿ, ಮೇ 26: ಕಲೆಗಳ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಿದಾಗ ಮಾತ್ರ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾದ್ಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಸಚಿವರು ಡಾ. ರಾಜು ಜಡಾರ್ ತಿಳಿಸಿದರು. ತುಂಗಾ ಗಂಗಾ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರ ದೊಂದಿಗೆ ಸೋಮವಾರ ರಾತ್ರಿ ಹೊಂಗಿರಣ ರಂಗ ಮಂದಿರದಲ್ಲಿ ಹಮ್ಮಿಕೊಂಡ ತುಂಗಾ ಅಧಿಕಮಾಸ ಸಾಂಸ್ಕ್ರತಿಕ ವೈಭವ 2026 ಕಾರ್ಯಕ್ರಮವನ್ನು ವಾದ್ಯಬಾರಿಸಿ ಉದ್ಘಾಟಿಸಿ ಅವರು ಮಾತನಾಡಿದರು. …
-

ಬಾಲ್ಯವಿವಾಹ ಹಾಗೂ ಅಪ್ರಾಪ್ತರ ಗರ್ಭಧಾರಣೆ ತಡೆಗೆ ಕಠಿಣ ಕ್ರಮಕ್ಕೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ
ಬಳ್ಳಾರಿ,ಮೇ 25: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಸೋಮವಾರ, ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ…
Latest News

Stay Connected
Tags
About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed









